ಮೇ.10ರಂದು ಬೆಂಗಳೂರಿನ ನಮ್ಮ ಮೆಟ್ರೋ ನೇರಳೆ ಮಾರ್ಗದ ಈ ನಿಲ್ದಾಣಗಳ ನಡುವೆ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

ಮೇ.10ರಂದು ಬೆಂಗಳೂರಿನ ನಮ್ಮ ಮೆಟ್ರೋ ನೇರಳೆ ಮಾರ್ಗದ ಈ ನಿಲ್ದಾಣಗಳ ನಡುವೆ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

Kannada News Now

Kannada News Now

54m

Loading...

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ದಿನಾಂಕ 10ನೇ, ಮೇ 2026 (ಭಾನುವಾರ) ದಂದು ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ, ಸೆಂಟ್ರಲ್ ಕಾಲೇಜ್ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಕಾಮಗಾರಿಗಾಗಿ, ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಎರಡು (2) ಗಂಟೆಗಳ ಕಾಲ, ಅಂದರೆ ಬೆಳಿಗ್ಗೆ 07:00 ಗಂಟೆಯಿಂದ 09:00 ಗಂಟೆಯವರೆಗೆ ಸ್ಥಗಿತಗೊಳಿಸಲಾಗುತ್ತದೆ.

ಆದಾಗ್ಯೂ, ಈ ಅವಧಿಯಲ್ಲಿ ಮೆಟ್ರೋ ರೈಲು ಸೇವೆಗಳು ಸಂಬಂಧಿತ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಗೆ ನಿಯಮಿತ ವೇಳಾಪಟ್ಟಿಯಂತೆ ಪ್ರಾರಂಭವಾಗಿ, ಕೆಳಕಂಡ ಮಾರ್ಗಗಳಲ್ಲಿ ಎಂದಿನ ಸಂಚರಿಸಲಿವೆ:

  • ಚಲ್ಲಘಟ್ಟ - ವಿಜಯನಗರ
  • ಎಂ.ಜಿ. ರಸ್ತೆ - ವೈಟ್‌ಫೀಲ್ಡ್ (ಕಾಡುಗೋಡಿ)
  • ಮಾದಾವರ - ಸಿಲ್ಕ್ ಇನ್‌ಸ್ಟಿಟ್ಯೂಟ್
  • ಆರ್.ವಿ. ರಸ್ತೆ - ಬೊಮ್ಮಸಂದ್ರ

ಬೆಳಿಗ್ಗೆ 09:00 ಗಂಟೆಯ ನಂತರ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ - ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳುತ್ತವೆ.

ಪ್ರಯಾಣಿಕರು ಮೇಲೆ ತಿಳಿಸಿರುವ ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಪೂರ್ವಯೋಜನೆ ಮಾಡಿಕೊಳ್ಳುವಂತೆ ವಿನಂತಿಸಿಕೊಳ್ಳಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now