IPL 2026: ಡೆಲ್ಲಿ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಕೆಕೆಆರ್

IPL 2026: ಡೆಲ್ಲಿ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಕೆಕೆಆರ್

ಪ್ರಜಾವಾಣಿ

ಪ್ರಜಾವಾಣಿ

60m

Loading...

ವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 51ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದಿರುವ ಕೆಕೆಆರ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ.

ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಡಿರುವ 10 ಪಂದ್ಯಗಳಲ್ಲಿ 4ರಲ್ಲಿ ಗೆಲುವು ಸಾಧಿಸಿದ್ದು, 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ಅಜಿಂಕ್ಯ ರಹಾನೆ ನಾಯಕತ್ವದ ಕೆಕೆಆರ್ ತಂಡ ಕೂಡ ಈ ಆವೃತ್ತಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದ್ದು, ಆಡಿರುವ 9 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸಿದ್ದು 7 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

ಪ್ಲೇ ಆಫ್ ರೇಸ್‌ನಲ್ಲಿ ಉಳಿಯಲು ಎರಡೂ ತಂಡಗಳಿಗೂ ಈ ಪಂದ್ಯವು ಮಹತ್ವದ್ದಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Prajavani